Thursday, June 4, 2026
Homeತಾಜಾ ಸುದ್ದಿಧರ್ಮಸ್ಥಳಕ್ಕೆ ಬಂದು ವಾಪಾಸ್ ತೆರಳುತ್ತಿದ್ದಾಗ ಅಪಘಾತ : 9 ಮಂದಿ ಸಾವು

ಧರ್ಮಸ್ಥಳಕ್ಕೆ ಬಂದು ವಾಪಾಸ್ ತೆರಳುತ್ತಿದ್ದಾಗ ಅಪಘಾತ : 9 ಮಂದಿ ಸಾವು

- Advertisement -
- Advertisement -

ಹಾಸನ : ಕೆಎಸ್​ಆರ್​ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ತಡರಾತ್ರಿ ನಡೆದಿದೆ.

ಟೆಂಪೋ ಟ್ರಾವೆಲರ್​ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಾಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!