Thursday, June 4, 2026
Homeಕರಾವಳಿಬಂಟ್ವಾಳ; ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿ, ಯುವಕ ಸಾವು

ಬಂಟ್ವಾಳ; ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿ, ಯುವಕ ಸಾವು

- Advertisement -
- Advertisement -

ಬಂಟ್ವಾಳ; ಕೆಎಸ್.ಆರ್.ಟಿ.ಸಿ.ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಸರಪಾಡಿ ನಿವಾಸಿ ಸೇಸಪ್ಪ ಯಾನೆ ಶ್ರೇಯಸ್ (30) ಮೃತ ಯುವಕ

ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ಕೆಲಸ ಮಾಡುತ್ತಿದ್ದ ಶ್ರೇಯಸ್, ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು. ಅಲ್ಲಿಂದ , ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ ಈತ ಕೊನೆಯುಸಿರೆಳೆದಿದ್ದಾನೆ.ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!