Thursday, June 4, 2026
Homeಕರಾವಳಿಉಡುಪಿಉಡುಪಿ: ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು, ಯುವಕ ಸಾವು

ಉಡುಪಿ: ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಕಾರು, ಯುವಕ ಸಾವು

- Advertisement -
- Advertisement -

ಉಡುಪಿ:ರಸ್ತೆ ಬದಿ ಹೋಗುತ್ತಿದ್ದ ಬೈಕ್‌ನ ಮೇಲೆ ಏಕಾಏಕಿ ಕಾರು ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿಯ ಕರಾವಳಿ ಜಂಕ್ಷನ್‌ ಬಳಿ ಸಂಭವಿಸಿದೆ.  ವಿಜಯಪುರದ ನಿವಾಸಿ ಸುನಿಲ್ (24) ಮೃತ ಬೈಕ್ ಸವಾರ.

ಬ್ರಹ್ಮಾವರದಿಂದ ಮಂಗಳೂರು ಕಡೆಗೆ ರಾ.ಹೆಯಲ್ಲಿ ಬರುತ್ತಿದ್ದ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಪಕ್ಕದ ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಬಂದು ಬಿದ್ದಿದೆ.ಪರಿಣಾಮ ಬೈಕ್‌ ಸವಾರ ಸುನಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಹಸವಾರ ಬಾಗಲಕೋಟೆ ನಿವಾಸಿ ಮಂಜುನಾಥ್‌ ಗಾಯಗೊಂಡಿದ್ದಾರೆ. ಉಡುಪಿ ನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!