- Advertisement -
![]()
- Advertisement -
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿನ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದ್ದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮೂಡಿಗೆರೆಯ ಮಾಳಿಗನಾಡು ಗ್ರಾಮದ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮಹಿಳೆ ರೇಖಾ (36) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡುಗೆ ವೇಳೆ ಸ್ಟವ್ ಹಚ್ಚುವಾಗ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ದುರ್ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಬಹುತೇಕ ನಾಶವಾಗಿದೆ. ಹತ್ತಾರು ಮೂಟೆ ಕಾಫಿ ಬೀಜಗಳು ಕೂಡಾ ಬೆಂಕಿಗಾಹುತಿಯಾಗಿವೆ.
ಸದ್ಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


