Thursday, June 4, 2026
Homeಕರಾವಳಿವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ: ಮಹಿಳೆ ಪ್ರಾಣಾಪಾಯದಿಂದ ಪಾರು

ವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ: ಮಹಿಳೆ ಪ್ರಾಣಾಪಾಯದಿಂದ ಪಾರು

- Advertisement -
- Advertisement -

ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ‌ ತಗುಲಿ ಮನೆಯೊಳಗಿದ್ದ ಮಹಿಳೆ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಾಣಿ ಗ್ರಾಮದಲ್ಲಿ ನಡೆದಿದೆ. ಬೆಂಕಿ ತಗುಲಿದ ಪರಿಣಾಮ  ಮನೆ ಸಂಪೂರ್ಣವಾಗಿ ಸುಟ್ಟು ಹೋಗಿ ಅಪಾರ ನಷ್ಟವುಂಟಾಗಿದೆ.  

ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪಾ ಒಬ್ಬರೇ ಮನೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!