Monday, June 8, 2026
HomeUncategorizedಬಂಟ್ವಾಳ:ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ

ಬಂಟ್ವಾಳ:ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ

- Advertisement -
- Advertisement -

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.

ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!