Monday, April 29, 2024
Homeಕರಾವಳಿಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ

ಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ

spot_img
- Advertisement -
- Advertisement -

ಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತವಾಗಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ .  ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!