Saturday, June 6, 2026
Homeಕರಾವಳಿಮೂಡಬಿದಿರೆ: ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಮೂಡಬಿದಿರೆ: ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವು

- Advertisement -
- Advertisement -

ಮೂಡಬಿದಿರೆ: ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಕಾಶಿಪಟ್ಣದ ಉಮೇಶ್ (49) ಮೃತ ದುರ್ದೈವಿ.

ಉಮೇಶ್ ಅವರು ಮೂಡಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದಾಗ, ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಗೆ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡಬಿದಿರೆ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ.ಪರಿಣಾಮ  ಗಂಭೀರ ಗಾಯಗೊಂಡ ಉಮೇಶ್ ಅವರನ್ನು ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಕಲಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!