Friday, January 27, 2023
Homeಕರಾವಳಿಕಾಸರಗೋಡಿನಲ್ಲಿ ಲಾರಿಗಳ ಮಧ್ಯೆ ಭೀಕರ ಅಪಘಾತ; ಚಾಲಕರಿಗೆ ಗಂಭೀರ ಗಾಯ

ಕಾಸರಗೋಡಿನಲ್ಲಿ ಲಾರಿಗಳ ಮಧ್ಯೆ ಭೀಕರ ಅಪಘಾತ; ಚಾಲಕರಿಗೆ ಗಂಭೀರ ಗಾಯ

- Advertisement -
- Advertisement -

ಕಾಸರಗೋಡು: ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.

ಗಾಯಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಗೆ ದಾಖಲಿಸಿ, ಬಳಿಕ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ

- Advertisement -
spot_img

Latest News

error: Content is protected !!