- Advertisement -
- Advertisement -
ವಿಟ್ಲ: ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯಗೊಂಡ ಘಟನೆ ಇಂದು ಪುತ್ತೂರು – ಮಂಗಳೂರು ರಸ್ತೆಯ ಕೊಡಾಜೆ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಎಂದು ತಿಳಿಸಲಾಗಿದೆ. ಅವರು
ಫಲ್ಗುಣಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ. ಬೈಕಿನಲ್ಲಿ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಗಂಭೀರ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -