Thursday, June 4, 2026
Homeಕರಾವಳಿಮಂಗಳೂರುವಿಟ್ಲ;  10 ವರ್ಷಗಳ ಹಿಂದಿನ ಅತ್ಯಾಚಾ*ರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ;  10 ವರ್ಷಗಳ ಹಿಂದಿನ ಅತ್ಯಾಚಾ*ರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ವಿಟ್ಲ;  10 ವರ್ಷಗಳ ಹಿಂದಿನ ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಬಂಧಿತ ಆರೋಪಿ.

ದಿನಾಂಕ 04.11.2015 ರಂದು ರಾತ್ರಿ,  ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಆತನನ್ನು ವಿಟ್ಲ  ಪೊಲೀಸ್  ಠಾಣಾ  ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ‌, ಸ್ಥಳಿಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು, ದಿನಾಂಕ  13-07-2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

- Advertisement -

Latest News

error: Content is protected !!