- Advertisement -
![]()
- Advertisement -
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ ಮತ್ತು ಬಿಲ್ಲವ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಬೆನ್ನಲ್ಲೇ ಆರೋಪಿ ಅನಿತಾ ಕಾಸರಗೋಡು ಅವರನ್ನು ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಆರೋಪಿ ಅನಿತಾ ಕಾಸರಗೋಡು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜೂನ್ 25ರವೆರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನು ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯನ್ನು ಬೆಂಗಳೂರಿನಲ್ಲಿರುವ ಅವರ ಸಹೋದರಿಯ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -


