Sunday, June 7, 2026
Homeಅಪರಾಧಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

- Advertisement -
- Advertisement -

ಸುಳ್ಯ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಎಂದು ತಿಳಿದು ಬಂದಿದೆ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂ ಮೂಲಕ ಪರಿಚಯಿಸಿಕೊಂಡ ಜಿತೇಶ್ ಆಕೆಯ ಜೊತೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದನೆನ್ನಲಾಗಿದೆ.

ಈ ಬಗ್ಗೆ ವಿದ್ಯಾರ್ಥಿನಿಯ ಮನೆಯವರು ಸುಳ್ಯ ಪೋಲೀಸರಿಗೆ ದೂರು ನೀಡಿದ್ದು ಪೊಲೀಸರು ಸೆ 13 ರಂದು ಜಿತೇಶ್‌ನನ್ನು ಅಡ್ಕಾರ್ ಬಳಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ.ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಕಾರನ್ನು ಕೂಡಾ ಯುವಕನಿಂದ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!