Thursday, June 4, 2026
Homeಕರಾವಳಿಬಂಟ್ವಾಳ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯ ಬಂಧನ

ಬಂಟ್ವಾಳ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಂಬೆ ನಿವಾಸಿ ಹಸನ್ ಬಾವ ಬಂಧಿತ.

ಮೇ. 19 ರಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ಹಾಮದ್ ಹಾಜಿ‌ರಸ್ತೆಯ ಪರ್ಲಬೈಲು ನಿವಾಸಿ ಮಜೀದ್ ಎಂಬವರ ಮನೆಯಲ್ಲಿ ಸುಮಾರು 1,49,000 ಸಾವಿರ ಮೌಲ್ಯದ 28 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕಳವು ನಡೆದಿತ್ತು.‌‌ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಮಹಡಿಯ ಹಂಚನ್ನು ಸರಿಸಿ ಒಳಪ್ರವೇಶಿಸಿ ಮನೆಯ ಕಪಾಟಿನಲ್ಲಿ ಇಟ್ಟಿದ್ದ ಚಿನ್ನವನ್ನು ಕಳವು ಮಾಡಿದ್ದರು. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!