ಮಂಗಳೂರು; ತಲ್ವಾರ್ ಹಿಡಿದು ನೃತ್ಯ ಮಾಡಿ ರೀಲ್ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಜೆ.ಡಮ್ ರೋಡ್ ಬಂದರು ನಿವಾಸಿ ಅಮೀರ್ ಸುಹೇಲ್(28) ಹಾಗೂ ಕಾವೂರು ಉರುಂದಾಡಿಗುಡ್ಡೆ ನಿವಾಸಿ ಸುರೇಶ, (29) ಬಂಧಿತರು.
ಪ್ರಕರಣದ ವಿವರ;
ದಿನಾಂಕ 13-12-2025 ರಂದು ಸಾಮಾಜಿಕ ಜಾಲತಾಣವಾದ ಫೇಸಬುಕ್ ಖಾತೆಯಲ್ಲಿ “Suresh Psy” ಎಂಬ ಹೆಸರಿನ ಪೇಸಬುಕ್ ಖಾತೆ ಹೊಂದಿರುವ ಸುರೇಶ ಎಂಬುವನು ತನ್ನ ಫೇಸಬುಕ್ ಖಾತೆಯಲ್ಲಿ MOB ಅಸಾಮಿಯಾದ ಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಮೇಲೆ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿಗೆ ಹಾಕಿ. ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕ ರಿಗೆ ಭಯ ಹುಟ್ಟಿಸುವ ಅಮೀರ್ ಸುಹೇಲ್ ಹಾಗೂ ಸುರೇಶ ಎಂಬುವವನ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 188/2025 ಕಲಂ. 352(2) ಭಾರತೀಯ ನ್ಯಾಯ ಸಂಹಿತೆ 2023 ಜೊತೆಗೆ 4. 25(1ಬಿ) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಯಾಕೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
ದಿನಾಂಕ 13-12-2025 ರಂದು ಈ ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿಗನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ರಾಘವೇಂದ್ರ ಎಂ. ಬೈಂದೂರುರವರು, ಪೊಲೀಸ್ ಉಪನಿರೀಕ್ಷಕರಾದ ಶ್ರೀ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.


