Wednesday, April 16, 2025
Homeಕರಾವಳಿಉಡುಪಿಮೂಡಬಿದ್ರೆ: ವೃದ್ಧೆಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯ ಬಂಧನ

ಮೂಡಬಿದ್ರೆ: ವೃದ್ಧೆಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಮೂಡಬಿದ್ರೆ: ವೃದ್ಧೆಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.ದಿನಾಂಕ 31-03-2025 ರಂದು ಮದ್ಯಾಹ್ನ ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ ಶ್ರೀಮತಿ ಇಂದಿರಾ(70)  ಎಂಬವರ  ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಕದ್ದು ಬೈಕ್ ನಲ್ಲಿ ಪರಾರಿಯಾಗಿದ್ದ ಬೈಕ್ ನಲ್ಲಿ ಪರಾರಿಯಾಗಿದ್ದ.ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾರ್ಕಳ ತಾಲೂಕಿನ ಕಾಂತಾವಾರ ಗ್ರಾಮದ ಪ್ರಶಾಂತ್ ಸಾಲಿಯನ್ (34) ಬಂಧಿತ. ಆರೋಪಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದು ಹಾಗೂ ದಿನಾಂಕ: 02-12-2024 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಕಾಂತಾವರ ಅಂಬರೀಶ್ ಗುಹೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಲಿಗೆ ನಡೆಸಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈ ಬಗ್ಗೆ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಆರೋಪಿ ಕದ್ದ ಚಿನ್ನದ ಮಾಂಗಲ್ಯ ಕರಿಮಣಿ ಸರ ಹಾಗೂ ಚಿನ್ನದ ಸರದ ಒಂದು ತುಂಡು ಸ್ವಾಧೀನಪಡಿಸಿಕೊಂಡಿದ್ದು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ ಕೆಂಪು ಬಣ್ಣದ KA 20 X 3393 ನೇ TVS Apache ಬೈಕ್ ಅನ್ನು ಕೂಡ ಸ್ವಾಧೀನ ಪಡೆಸಿಕೊಂಡಿರುವುದಾಗಿದೆ. ಸ್ವಾಧೀನ ಪಡಿಸಿಕೊಂಡಿರುವ ಸೊತ್ತುಗಳ ಅಂದಾಜು ಮೌಲ್ಯ ಸುಮಾರು 3,30,000/- ರೂ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಮಾನ್ಯ DCP ರವರುಗಳಾದ  ಶ್ರೀ ಸಿದ್ಧಾರ್ಥ ಗೊಯಲ್ IPS (ಕಾ&ಸು), ಶ್ರೀ ರವಿಶಂಕರ್ DCP (ಅ & ಸಂ) ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಮಾನ್ಯ ACP ಶ್ರೀ ಶ್ರೀಕಾಂತ್. ಕೆ ರವರ ನಿರ್ದೇಶನದಂತೆ, ಈ ಕಾರ್ಯಚರಣೆಯಲ್ಲಿ ಮೂಡಬಿದ್ರೆ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಸಂದೇಶ್ ಪಿ.ಜಿ ರವರ ನೇತೃತ್ವದ ತಂಡ ಪಿ.ಎಸ್.ಐ ಗಳಾದ ಶ್ರೀ ಕೃಷ್ಣಪ್ಪ ಮತ್ತು ಶ್ರೀಮತಿ ಪ್ರತಿಭ ಕೆ.ಸಿ, ಹಾಗೂ ಎ.ಎಸ್.ಐ ರಾಜೇಶ್ ಮತ್ತು ಹೆಚ್.ಸಿ ಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್ , ಪ್ರದೀಪ್ ಕುಮಾರ್ ಬಣಗರ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ ವೆಂಕಟೇಶ್ ರವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.

- Advertisement -
spot_img

Latest News

error: Content is protected !!