Monday, June 8, 2026
Homeಕರಾವಳಿಮಂಗಳೂರುಮಂಗಳೂರು: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಬಂಧಿತ.

ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಶೋರ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ಈ ಪ್ರಕರಣವನ್ನು LPC ಪ್ರಕರಣವೆಂದು ಪರಿಗಣಿಸಿತ್ತು. ಅದರಂತೆ ಆರೋಪಿಯ ಪತ್ತೆಗಾಗಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಎಎಸ್ಸೈ ಗಂಗಾಧರ ಎನ್, ಎಚ್.ಸಿ ಚಂದ್ರಹಾಸ್ ಸನೀಲ್, ಎಚ್‌ಸಿ ಪುರುಷೊತ್ತಮ ಅವರನ್ನು ಒಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಬುಧವಾರ ಸಕಲೇಶಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

- Advertisement -

Latest News

error: Content is protected !!