Saturday, April 27, 2024
Homeಕರಾವಳಿಬೆಳ್ತಂಗಡಿ : ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ:ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಬೆಳ್ತಂಗಡಿ...

ಬೆಳ್ತಂಗಡಿ : ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ:ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

spot_img
- Advertisement -
- Advertisement -

ಬೆಳ್ತಂಗಡಿ : ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗನ್ನು ವಶಕ್ಕೆ ಪಡೆದಿದ್ದಾರೆ‌.ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಮದಡ್ಕದ ಅಬುಸಾಲಿ ಮಕ್ಕಳಾದ ಆರೋಪಿ ನಿಸಾರ್ ಮತ್ತು ರೌಫ್ ಇಬ್ಬರನ್ನು ಜ.24 ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ವಿವರ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ರವರು ಜ.18 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು , ಗ್ರಾಮ ಅಭಿವೃದ್ದಿ ಅಧಿಕಾರಿಯವರೊಂದಿಗೆ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.

ಈ ವೇಳೆ ಸ್ಥಳವನ್ನು ಒತ್ತುವಾರಿ ಮಾಡಿಕೊಂಡ ನಿಸಾರ್‌ ಮತ್ತು ರೌಫ್‌ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದಾರೆ ಎಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ  ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು‌‌.ಅದರಂತೆ ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!