Thursday, June 4, 2026
Homeತಾಜಾ ಸುದ್ದಿಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಆರೋಪಿ ಅರೆಸ್ಟ್

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ, ಆರೋಪಿ ಅರೆಸ್ಟ್

- Advertisement -
- Advertisement -

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಶೆಡ್ ನಲ್ಲಿ ಮಲಗಿದ್ದ  ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಶೇಖ್ ನಸ್ರು ಬಂಧಿತ ಆರೋಪಿ. ಈತನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶೇಖ್ ನಸ್ರು ಮದ್ಯದ ನಶೆಯಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಜ.24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಘಟನೆಗೆ ರಾಜ್ಯದಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು. ಆರೋಪಿಯನ್ನು ಬಂಧಿಸಬೇಕು ಎಂದು ಭಾರೀ ಆಗ್ರಹ ಕೇಳಿ ಬಂದಿತ್ತು.

- Advertisement -

Latest News

error: Content is protected !!