Thursday, May 9, 2024
Homeಅಪರಾಧಮಂಗಳೂರು: ಕೋರ್ಟ್ ಕಟ್ಟಡದಿಂದ ಹಾರಿ ಆರೋಪಿ ಆತ್ಮಹತ್ಯೆ ; ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ!

ಮಂಗಳೂರು: ಕೋರ್ಟ್ ಕಟ್ಟಡದಿಂದ ಹಾರಿ ಆರೋಪಿ ಆತ್ಮಹತ್ಯೆ ; ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ!

spot_img
- Advertisement -
- Advertisement -

ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ನ್ಯಾಯಾಲಯ ಸಂಕೀರ್ಣದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಆರೋಪಿಯನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ. ಸೋಮವಾರ ತೊಕ್ಕೊಟ್ಟಿನ ಸೆಬಾಸ್ಟಿಯನ್ ಕಾಲೇಜು ಬಳಿ ಅಪ್ರಾಪ್ತ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸರು ಇವರನ್ನು ಬಂಧಿಸಿದ್ದರು.

ಉಳ್ಳಾಲ ಪೊಲೀಸರು ಆರೋಪಿಯನ್ನು ಇಂದು ಕೋರ್ಟಿಗೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೊರಗೆ ತಂದು ಕುಳಿತಿರುವಂತೆ ಪೊಲೀಸರು ಸೂಚಿಸಿದ್ದರು. ಅದೇ ವೇಳೆ ಆರೋಪಿ ರವಿರಾಜ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ ಎಂದು ಹೇಳಲಾಗಿದೆ. ಕೋರ್ಟ್ ಒಳಗಡೆಯೇ ಲಿಫ್ಟ್ ಇರುವ ಜಾಗದಲ್ಲಿ ಮೇಲಿನಿಂದ ಕೆಳಕ್ಕೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾನೆ.

ತಾನು ಯಾವುದೇ ತಪ್ಪು ಮಾಡಿಲ್ಲ. ಪರಿಚಯದ ಹುಡುಗಿ ಆದ್ದರಿಂದ ಹತ್ತಿರ ಹೋಗಿದ್ದೆ ಎಂದು ವಕೀಲರಲ್ಲಿ ರವಿರಾಜ್ ಹೇಳಿದ್ದರು. ಆದರೆ, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಸಾರ್ವಜನಿಕ ಪ್ರದೇಶದಲ್ಲಿ ಸೈಕಲಿನಲ್ಲಿ ಬಂದಿದ್ದ ಅನ್ಯಕೋಮಿನ ಹುಡುಗಿಯನ್ನು ಮುಟ್ಟಲು ಹೋಗಿದ್ದು ಸ್ಥಳೀಯರನ್ನು ಕೆರಳಿಸಿತ್ತು. ಸ್ಥಳೀಯರು ಸೇರಿ, ರವಿರಾಜ್ ಮೇಲೆ ಥಳಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ತಾನು ಮಾಡದ ತಪ್ಪಿಗೆ ಈ ರೀತಿ ಆಯ್ತಲ್ಲಾ ಎಂಬ ನೋವಿನಲ್ಲಿ ರವಿರಾಜ್ ಕೋರ್ಟ್ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತೆರಳಿ, ಪರಿಶೀಲನೆ ನಡೆಸಿದ್ದಾರೆ

- Advertisement -
spot_img

Latest News

error: Content is protected !!