Wednesday, May 15, 2024
Homeಕರಾವಳಿಉಡುಪಿಉಡುಪಿ: ಮನೆಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್:‌ ಬಂಧಿತನಿಂದ 4.35 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಮನೆಕಳ್ಳತನ ಪ್ರಕರಣದ ಆರೋಪಿ ಅರೆಸ್ಟ್:‌ ಬಂಧಿತನಿಂದ 4.35 ಲಕ್ಷ ಮೌಲ್ಯದ ಸೊತ್ತು ವಶ

spot_img
- Advertisement -
- Advertisement -

ಉಡುಪಿ: ಶಿವಳ್ಳಿಯಲ್ಲಿ ಡಿ.11ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣ ಸಂಬಂಧ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಬಂಧಿತ ಆರೋಪಿ.  ಈತನಿಂದ 4 ಲಕ್ಷ 35 ಸಾವಿರ ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ, ಬೆಳ್ಳಿ ಆಭರಣ ಮೊದಲಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

- Advertisement -
spot_img

Latest News

error: Content is protected !!