Thursday, October 29, 2026
Homeಅಪರಾಧ12 ವರ್ಷಗಳ ಬಳಿಕ ಕಳ್ಳತನ ಪ್ರಕರಣದ ಆರೋಪಿಯ ಬಂಧನ

12 ವರ್ಷಗಳ ಬಳಿಕ ಕಳ್ಳತನ ಪ್ರಕರಣದ ಆರೋಪಿಯ ಬಂಧನ

- Advertisement -
- Advertisement -

ಮೂಡುಬಿದಿರೆ: 12 ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

12 ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಜಯಂತ, ಸುರೇಶ ಹಾಗೂ ಅಶೋಕ ಎಂಬವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪೈಕಿ ಜಯಂತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ (LPC) ಪ್ರಕರಣ ದಾಖಲಿಸಿತ್ತು.

ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ, ಆತ ಉಪ್ಪಿನಂಗಡಿಯ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಮಾಹಿತಿ ಲಭಿಸಿತ್ತು. ಅದರಂತೆ ಆತನನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರತಿಭಾ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಜೇಶ್, ಮುಹಮ್ಮದ್ ಇಟ್ಬಾಲ್, ನಾಗರಾಜ್, ರೋಹಿತ್ ಹಾಗೂ ವೆಂಕಟೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Latest News

error: Content is protected !!