Tuesday, May 14, 2024
Homeತಾಜಾ ಸುದ್ದಿಶಾಲೆಯಲ್ಲಿ ಬೈಬಲ್ ಶಿಕ್ಷಣ ಕಡ್ಡಾಯ ಆರೋಪ : ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತ

ಶಾಲೆಯಲ್ಲಿ ಬೈಬಲ್ ಶಿಕ್ಷಣ ಕಡ್ಡಾಯ ಆರೋಪ : ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತ

spot_img
- Advertisement -
- Advertisement -

ಬೆಂಗಳೂರು: ಇಲ್ಲಿನ ಕ್ಲಾರೆನ್ಸ್ ಹೈಸ್ಕೂಲಿನಲ್ಲಿ ಬೈಬಲ್ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹಿಂದೂಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ.

ರಿಚರ್ಡ್ಸ್ ಟೌನ್‌ನಲ್ಲಿರುವ ಈ ಶಾಲೆಗೆ ಪ್ರವೇಶಾತಿ ಪಡೆಯುವ ಪ್ರತಿ ವಿದ್ಯಾರ್ಥಿಗಳಿಗೂ ಬೈಬಲ್ ಓದುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಹೇಳಲಾಗಿದೆ. ಇದು ಸಂವಿಧಾನದ ಪರಿಚ್ಛೇದ 25ರ ಉಲ್ಲಂಘನೆ ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್ ಗೌಡ ದೂರಿದ್ದಾರೆ.

ಶಿಕ್ಷಣವನ್ನು ಇತರ ಮಕ್ಕಳಿಗೆ ಕಡ್ಡಾಯ ಮಾಡಿರುವುದು ಈ ಶಾಲೆಯ ಪ್ರಕಟಣೆಯಲ್ಲಿ ಇದೆ ಎಂದು ಹೇಳಲಾಗಿದೆ. ಕ್ರೈಸ್ತೇತರ ವಿದ್ಯಾರ್ಥಿಗಳ ಮೇಲೆ ಒಂದು ಧರ್ಮದ ಧಾರ್ಮಿಕ ಗ್ರಂಥವನ್ನು ಬಲವಂತವಾಗಿ ಹೇರುವುದು ಧಾರ್ಮಿಕ ನಂಬಿಕೆಗೆ ವಿರುದ್ಧ. ಇದು ಸರ್ವೋಚ್ಛ ನ್ಯಾಯಾಲಯದ ಆದೇಶದ ಉಲ್ಲಂಘನೆಯೂ ಎಂದು ಹೇಳಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವರಿಗೆ ದೂರು ನೀಡಲಾಗುವುದು. ಮುಂದಿನ ದಿನಗಳಲ್ಲಿ ನ್ಯಾಯಲಯದ ಮೊರೆ ಹೋಗಲಿದ್ದೇವೆ ಎಂದು ಅವರು ತಿಳಿಸಿದರು.

- Advertisement -
spot_img

Latest News

error: Content is protected !!