Monday, June 8, 2026
Homeಅಪರಾಧ‘ಟಾಕ್ಸಿಕ್’ ಸಿನಿಮಾ ಸೆಟ್ ಗಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

‘ಟಾಕ್ಸಿಕ್’ ಸಿನಿಮಾ ಸೆಟ್ ಗಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

- Advertisement -
- Advertisement -

ಬೆಂಗಳೂರು: ನಟ ಯಶ್ ಅವರ ‘ಟಾಕ್ಸಿಕ್ ’ ಸಿನಿಮಾವು ಚಿತ್ರೀಕರಣದ ಸಂದರ್ಭದಲ್ಲಿಯೇ ಭಾರಿ ಸದ್ದುಮಾಡುತ್ತಿದೆ. ಚಿತ್ರತಂಡವು ಬೆಂಗಳೂರಿನ ಹೊರವಲಯದಲ್ಲಿ  ಚಿತ್ರೀಕರಣಕ್ಕೆ ಸೆಟ್ ಹಾಕುವ ಸಲುವಾಗಿ ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಇದೀಗ ಅರಣ್ಯ ಇಲಾಖೆ ನ್ಯಾಯಾಲಯದ ಆದೇಶ ಪಡೆದು ಅರಣ್ಯ ಕಾಯ್ದೆಯಡಿಯಲ್ಲಿ ‘ಟಾಕ್ಸಿಕ್‌ʼ ಚಿತ್ರತಂಡ ಹಾಗೂ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಿಸಿದೆ.

ಟಾಕ್ಸಿಕ್ ಚಿತ್ರೀಕರಣದ ಸಂದರ್ಭದಲ್ಲಿ ಮರಗಳನ್ನು ನಾಶ ಮಾಡಿದ್ದರ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ.  ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇ,” ಎಂದು ಸಚಿವರು ತಿಳಿಸಿದ್ದಾರೆ.   

- Advertisement -

Latest News

error: Content is protected !!