ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ಮೇಲೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಈ ಪ್ರಕರಣದಲ್ಲಿ ನಿರ್ಮಾಲಾ ಸೀತಾರಾಮನ್ ಅವರು ಎ1, ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದರು ಎನ್ನಲಾಗಿದೆ.
ಆದರ್ಶ್ ಐಯ್ಯರ್ ಅವರು ನಿರ್ಮಲಾ ಸೀತಾರಾಮನ್ ಸೇರಿ ಹಲವರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಆದರೆ ಇದೀಗ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆರೋಪಗಳಿಗೆ ಸಾಕಷ್ಟು ಆಧಾರಗಳಿಲ್ಲದ ಕಾರಣ ಎಫ್‌ಐಆರ್ ರದ್ದುಗೊಳಿಸುವಂತೆ ಆದೇಶ ಪ್ರಕಟಿಸಿದೆ.