- Advertisement -
![]()
- Advertisement -
ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಗಿರಿಧರ ರೈ ಬಂಧಿತ ಆರೋಪಿ.
ದಿನಾಂಕ 26.10.2025 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮುರುಳ್ಯ ಗ್ರಾಮದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಗಿರಿಧರ ರೈ ಎಂಬಾತ ಬಾಲಕಿ ಒಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಪೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ
- Advertisement -


