- Advertisement -
- Advertisement -
ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡ ಪುಷ್ಪರಾಜ್ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೂರಿ ಇರಿದು ಪರಾರಿಯಾಗಿದ್ದ ಆರೋಪಿ ರವಿ ಯಾನೆ ರವೀಂದ್ರನನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಇಂದು ಬಂಧಿಸಿದ್ದಾರೆ.
ಎ.14 ರಂದು ಭಾನುವಾರ ರಾತ್ರಿ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಹಿಂದೂ ಯುವಸೇನೆಯ ಮುಖಂಡ ಪುಷ್ಪರಾಜ್ ಅವರಿಗೆ ರವಿ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ.ಚೂರಿ ಇರಿತದಿಂದ ಗಾಯಗೊಂಡಿದ್ದ ಪುಷ್ಪರಾಜನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಬಳಿಕ ಆರೋಪಿ ರವಿ ಮೊಬೈಲ್ ಫೋನ್ ಸ್ವಿಚ್ ಆಪ್ ಮಾಡಿ ಪರಾರಿಯಾಗಿದ್ದ. ಇದೀಗ ಘಟನೆ ನಡೆದು ನಾಲ್ಕು ದಿನಗಳ ಬಳಿಕ ಈತನನ್ನು ಕಾವಳಕಟ್ಟೆ ಎಂಬಲ್ಲಿಂದ ಪೋಲೀಸರು ವಶಕ್ಕೆ ಪಡೆದುಕೊಂಡು ಗಲಾಟೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.ಚೂರಿ ಇರಿದ ಘಟನೆಗೆ ಸ್ಪಷ್ಟವಾದ ಕಾರಣ ಪೋಲಿಸ್ ತನಿಖೆಯ ಬಳಿಕ ತಿಳಿಯಬೇಕಿದೆ.
- Advertisement -