Thursday, June 4, 2026
Homeಕರಾವಳಿಉಡುಪಿಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ:ಆರೋಪಿ ಪ್ರವೀಣ್ ಚೌಗುಲೆಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

ಉಡುಪಿ: ಒಂದೇ ಕುಟುಂಬದ ನಾಲ್ವರ ಹಂತಕ ಅರುಣ್ ಪ್ರವೀಣ್ ಚೌಗುಲೆಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಉಡುಪಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪ್ರವೀಣ್ ಚೌಗುಲೆಯನ್ನು ಹಾಜರು ಪಡಿಸಲಾಗಿದ್ದು, ನ್ಯಾಯಾಲಯದ ಸುತ್ತಾಮುತ್ತ ಐವತ್ತಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮೂಲಕ ಬಿಗಿ ಭದ್ರತೆ ಒದಗಿಸಲಾಗಿತ್ತು.

ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರ ಮುಂದೆ ಕೊಲೆ ಆರೋಪಿಯನ್ನು ಪೊಲೀಸರು ಹಾಜರುಪಡಿಸಿದ್ದು, ಒಬ್ಬಳ ಮೇಲಿನ ದ್ವೇಷದಿಂದಾಗಿ ಸಾಕ್ಷ್ಯ ನಾಶ ಮಾಡಲು ಎಲ್ಲರ ಕೊಲೆ ಮಾಡಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಆರೋಪಿ ಪ್ರವೀಣ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಮಹಾರಾಷ್ಟ್ರದ ಸಾಂಗ್ಲಿ ಮೂಲದ ಆರೋಪಿಯನ್ನು ನಿನ್ನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪೊಲೀಸರು ಬಂಧಿಸಿದ್ದರು.

- Advertisement -

Latest News

error: Content is protected !!