Thursday, June 4, 2026
Homeಕರಾವಳಿಉಡುಪಿಉಡುಪಿ: ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣ: ಆರೋಪಿ ಮಗನಿಗೆ ಜೀವಾವಧಿ ಶಿಕ್ಷೆ

ಉಡುಪಿ: ತಂದೆಯನ್ನೇ ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣ: ಆರೋಪಿ ಮಗನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಉಡುಪಿ: ತಂದೆಯನ್ನೇ ಕೊಲೆ ಮಾಡಿದ ಆರೋಪಿ ಮಗನಿಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಪೆರಂಪಳ್ಳಿ ಭಂಡಾರಮನೆ ನಿವಾಸಿ ಪ್ರಜೋತ್ ಶೆಟ್ಟಿ (50) ಶಿಕ್ಷೆಗೊಳಗಾದ ಆರೋಪಿ. ಈತ ಕುಡಿಯಲು ಹಣ ಕೊಡ್ಲಿಲ್ಲ, ಆಸ್ತಿಯಲ್ಲಿ ಪಾಲು ಕೊಡ್ಲಿಲ್ಲ ಅಂತ ಕಳೆದ ಎರಡು ವರ್ಷಗಳ ಹಿಂದೆ ತಂದೆಯನ್ನು ಕತ್ತಿಯಿಂದ ಕಡಿದು ಕೊಲೆಗೈದಿದ್ದ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು.

- Advertisement -

Latest News

error: Content is protected !!