Wednesday, June 24, 2026
Homeಕರಾವಳಿಉಡುಪಿಉಡುಪಿ:ಜೈಲಿನಲ್ಲಿ ಜೈಲಾಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗಿನ ಆರೋಪಿಗಳು

ಉಡುಪಿ:ಜೈಲಿನಲ್ಲಿ ಜೈಲಾಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಗರುಡ ಗ್ಯಾಂಗಿನ ಆರೋಪಿಗಳು

- Advertisement -
- Advertisement -

ಡುಪಿ: ಇತ್ತೀಚಿಗೆ ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳು ಜೈಲಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.

ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ತಗಾದೆ ತೆಗೆದ  ವಿಚಾರಣಾ ಕೈದಿ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಜಿಲ್ಲಾ ಜೈಲ್ ಅಧೀಕ್ಷಕ, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಕರೆ ಮಾಡಲು ತಡವಾಯಿತೆಂದು ಜೈಲರ್ ಎಸ್.ಎ.ಶಿರೋಳಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ಧರಾಮ ಬಿ.ಪಾಟೀಲ್ ಹಾಗೂ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಕುರ್ಚಿಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಜೊತೆಗೆ ಅಡುಗೆ ಕೋಣೆಯಲ್ಲಿದ್ದ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.ಘಟನೆ ಸಂಬಂಧ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!