- Advertisement -
![]()
- Advertisement -
ಪುತ್ತೂರು : ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಆದರ್ಶ ನಗರ ನಿವಾಸಿ ಹಳ್ಳಿಮನೆ ಹೈದರ್ ಅವರ ಮಗನಾದ ಆರೋಪಿ ಅಜ್ಜು @ ಅಝ್ಗರ್ ಆಲಿ(29) ಎಂಬಾತನನ್ನ ಕೊನೆಗೂ ಅರೆಸ್ಟ್ ಮಾಡಲಾಗಿದೆ.
ದಕ್ಷಿಣ ಕನ್ನಡ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಪೈಜುಲ್ಲಾ ಎಂ.ಡಿ ಹಾಗೂ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ಗಾಯತ್ರಿ ರವರ ಮಾರ್ಗದರ್ಶನದಲ್ಲಿ ಕುಮಾರ ಸ್ವಾಮಿ ಮತ್ತು ರಮೇಶ್ ರವರ ತಂಡ ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ ಖಚಿತ ಮಾಹಿತಿ ಮೇರೆಗೆ ಚಿಕ್ಕಮಗಳೂರಿನಲ್ಲಿರುವ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಆತನನ್ನು ಬಂಧಿಸಿ ಮಾನ್ಯ ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


