Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಮಹಿಳೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ 4 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ...

ಮಂಗಳೂರು; ಮಹಿಳೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ 4 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು; ಮಹಿಳೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ ಪ್ರಕರಣದಲ್ಲಿ 4 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ

ಮಧ್ಯಪ್ರದೇಶದ ಭೋಪಾಲ್ ನಗರದ ಕರಾಡ್‌ನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಶಹನ್ವಾಜ್ ಯಾನೆ ಶಾನು ಬಂಧಿತ ಆರೋಪಿ. ಈತನನ್ನು ಭೋಪಾಲ್‌ ನಗರದ 2ನೇ ಜೆಎಂಎಸ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಟ್ರಾನ್ಸಿಟ್ ವಾರಂಟ್ ಪಡೆದು ಠಾಣೆಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಗಳು ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ಕಲದ ಬಳಿಯ ನಿವಾಸಿ ಸುಮತಿ ಪ್ರಭು ಎಂಬವರನ್ನು 2024 ಫೆ.8ರಂದು ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿ ಮೈ ಮೇಲಿದ್ದ 3.80 ಲಕ್ಷ ರೂ. ಬೆಲೆ ಬಾಳುವ 24 ಪವನ್ ತೂಕದ ಚಿನ್ನದ ಒಡವೆಗಳನ್ನು ದೋಚಿಕೊಂಡು ಹೋಗಿದ್ದರು. ಈ ಪ್ರಕರಣದಲ್ಲಿ ರಾಜಸ್ಥಾನದ ಶಿವರಾಮ್, ಬಹುದ್ದೂ‌ರ್ ಸಿಂಗ್, ಉತ್ತರ ಪ್ರದೇಶದ ಶನ್ವಾಜ್ ಬಂಧಿತರಾಗಿದ್ದರು. ಪೊಲೀಸರು ಆರೋಪಿಗಳ ವಿರುದ್ಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಬಳಿಕ ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದರು. ನಂತರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.

- Advertisement -

Latest News

error: Content is protected !!