Saturday, June 6, 2026
Homeಅಪರಾಧಪುತ್ತೂರು : ವಿದ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಡಿಕ್ಕಿ; ಹಲ್ಲೆ ಮಾಡಿದ ಸವಾರರು!

ಪುತ್ತೂರು : ವಿದ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಡಿಕ್ಕಿ; ಹಲ್ಲೆ ಮಾಡಿದ ಸವಾರರು!

- Advertisement -
- Advertisement -

ಪುತ್ತೂರು : ಕಾಲೇಜು ಮುಗಿಸಿ ಮನೆಗೆ ಹೋಗುತಿದ್ದ ವಿದ್ಯಾರ್ಥಿಗಳ ಮೇಲೆ ದ್ವಿಚಕ್ರ ವಾಹನ ಸವಾರರು ಹಲ್ಲೆ ನಡೆಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ, ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಮಹಮ್ಮದ್ ಝಿಯಾದ್(17) ಮತ್ತು ಜಿಡೆಕಲ್ಲು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮಹಮ್ಮದ್ ಇಜಾಝ್(20) ಹಲ್ಲೆಗೊಳಗಾದವರು.

ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಹಿಂಬಾಗದಿಂದ ಬಂದ ದ್ವಿಚಕ್ರ ವಾಹನ ಝಿಯಾದ್ ಗೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಅವರು ರಸ್ತೆಗೆ ಬಿದ್ದಿದ್ದರು. ಈ ಬಗ್ಗೆ ಝಿಯಾದ್ ಬೈಕ್ ಸವಾರನಲ್ಲಿ ಪ್ರಶ್ನಿಸಿದ್ದು, ಈ ಸಂದರ್ಭದಲ್ಲಿ ಸವಾರ ಮತ್ತು ಸಹಸವಾರ ಝಿಯಾದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಹಲ್ಲೆ ತಡೆಯಲು ಬಂದ ಇಜಾಝ್ ಅವರ ಮೇಲೆಯೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!