Tuesday, June 9, 2026
Homeತಾಜಾ ಸುದ್ದಿಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ವಶಕ್ಕೆ ನೀಡಿದ ಎಸಿಎಂಎಂ ನ್ಯಾಯಾಲಯ

ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರ ವಶಕ್ಕೆ ನೀಡಿದ ಎಸಿಎಂಎಂ ನ್ಯಾಯಾಲಯ

- Advertisement -
- Advertisement -

ಬೆಂಗಳೂರು:ಹಲವು ತಿಂಗಳ ಹಿಂದೆ ಬಂಧನಕ್ಕೊಳಗಾದ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈನ ಬಿಲ್ಡರ್‌ ರಾಜು ಪಾಟೀಲ್‌ ಎಂಬುವರ ಕೊಲೆ ಪ್ರಕರಣದ ಸಂಬಂಧ ಮುಂಬೈ ಪೊಲೀಸರ ವಶಕ್ಕೆಪಡೆದಿದ್ದಾರೆ.ಇದಕ್ಕಾಗಿ ರಾಜು ಪಾಟೀಲ ಹತ್ಯೆ ಪ್ರಕರಣದಲ್ಲಿ ರವಿ ಪೂಜಾರಿ ಪಾತ್ರವಿರುವುದರಿಂದ ಆತನನ್ನು ವಿಚಾರಣೆ ನಡೆಸಲು ವಶಕ್ಕೆ ನೀಡಬೇಕು ಎಂದು ಮುಂಬೈ ಪೊಲೀಸರು, ನಗರದ 62ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ಆರೋಪಿಯನ್ನು ಹತ್ತು ದಿನಗಳ ಕಾಲ ಮುಂಬೈ ಪೊಲೀಸರ ವಶಕ್ಕೆ ನೀಡಿದ್ದಾರೆ. ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ಇಂದು ವಶಕ್ಕೆ ಪಡೆಯುವ ಸಾಧ್ಯತೆ ಇದ್ದು ತನಿಖೆಯ ಬಳಿಕ ಮತ್ತೆ ನ್ಯಾಯಾಂಗ ಬಂಧನಕ್ಕೆ ವಹಿಸಲಿದ್ದಾರೆ.

- Advertisement -

Latest News

error: Content is protected !!