Monday, May 13, 2024
Homeಕರಾವಳಿಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಸಚಿವ ಎಸ್.ಅಂಗಾರ

ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸೂಕ್ತ ಕ್ರಮ: ಸಚಿವ ಎಸ್.ಅಂಗಾರ

spot_img
- Advertisement -
- Advertisement -

ಬಂಟ್ವಾಳ: ಅಕ್ರಮ ಕಲ್ಲು ಗಣಿಗಾರಿಕೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬಂದರು , ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ .

ದೇವಸ್ಥಾನದ ಸುತ್ತಮುತ್ತಲಿನ ಜಾಗದಲ್ಲಿ 2 ಕ್ರಶರ್ ಮತ್ತು 2 ಕಲ್ಲು ಕ್ವಾರಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ . ಕಲ್ಲು ಗಣಿ ಗುತ್ತಿಗೆ ಪ್ರದೇಶದ ಹೊರ ಭಾಗದಲ್ಲಿ ಅಕ್ರಮವಾಗಿ ಕಟ್ಟಡ ಕಲ್ಲು ಸಾಗಾಣಿಕೆ ಮಾಡಿರುವುದರಿಂದ ಗಣಿ ಮಾಲೀಕರಿಗೆ 8.90 ಕೋಟಿ ರೂ.ದಂಡ ವಿಧಿಸಲಾಗಿದೆ . ಜಿಲ್ಲಾಧಿಕಾರಿ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಇಲಾಖೆಯವರು ಪಿಸಿಆರ್ ದಾವೆ ಹೂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ . ಜಿಯೋಗ್ರಾಫಿಕಲ್ ಸರ್ವೆ ಆಫ್ ಇಂಡಿಯಾದಿಂದ ಸರ್ವೇ ನಡೆಸಿ ಅದರ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು . ಸಚಿವ ಎಸ್.ಅಂಗಾರ ಅವರು ಜಿಲ್ಲಾಧಿಕಾರಿ ಹಾಗೂ ಸಂಬಂಧ ಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಲಾಗುವುದೆಂದು ತಿಳಿಸಿದ್ದಾರೆ .

- Advertisement -
spot_img

Latest News

error: Content is protected !!