Wednesday, May 8, 2024
Homeಕರಾವಳಿಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು; ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇನ್ನು ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕಿದೆ.ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ನಿಗಾ ವಹಿಸಲಾಗುವುದು, ಇಲಾಖೆ ಈ ಬಗ್ಗೆ ನಿಗಾವಹಿಸಿ ಅಂತವರ ಮೇಲೆ ಸ್ವಯಂ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!