ಮಂಗಳೂರು: ಅಂಚೆ ಇಲಾಖೆಯು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಸಹಯೋಗದಲ್ಲಿ ಹೊರತಂದಿರುವ ಯಕ್ಷಗಾನದ ಅಂಚೆಚೀಟಿ ಬಿಡುಗಡೆ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ‘ರಾಜ್ಯದ ಕರಾವಳಿಯ ಸಂಸ್ಕೃತಿಯ ದ್ಯೋತಕವಾದ ದೈವಾರಾಧನೆಯ ಅಂಚೆ ಚೀಟಿ ಬಿಡುಗಡೆಗೂ ಕ್ರಮವಹಿಸಲಾಗುವುದು’ ಎಂದು ತಿಳಿಸಿದರು.
‘ಐದು ವರ್ಷದ ಪ್ರಯತ್ನದ ಫಲವಾಗಿ ಅಂಚೆ ಚೀಟಿಯಲ್ಲಿ ಯಕ್ಷಗಾನವನ್ನು ಕಾಣುವಂತಾಗಿದೆ. ತೆಂಕು ಹಾಗೂ ಬಡಗು ತಿಟ್ಟುಗಳ ಚಿತ್ರಗಳನ್ನು ಇದರಲ್ಲಿ ಕಾಣಬಹುದು,’ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವೃತ್ತದ ಮುಖ್ಯ ಫೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ದಕ್ಷಿಣ ಕರ್ನಾಟಕ ವಲಯ ಪೋಸ್ಟ್ ಮಾಸ್ಟರ್ ಜನರಲ್ ಎಲ್.ಕೆ ಡ್ಯಾಶ್, ವಿದ್ವಾಂಸ ಪ್ರಭಾಕರ ಜೋಶಿ, ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಎಂಆರ್‌ಪಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಮುಂಡೂರು ಶ್ಯಾಮಪ್ರಸಾದ್ ಕಾಮತ್ ಪಾಲ್ಗೊಂಡಿದ್ದರು.
ಬೊಟ್ಟಿಕೆರೆ ಪುರುಷೋತ್ತಮ ಪೂಂಜಾ ರಚಿಸಿದ ‘ಲೋಕಾಭಿರಾಮ’ ಯಕ್ಷಗಾನವನ್ನು ಪಟ್ಲ ಸತೀಶ ಶೆಟ್ಟಿ ನಿರ್ದೇಶನದಲ್ಲಿ ಪ್ರದರ್ಶಿಸಲಾಯಿತು.