Tuesday, June 9, 2026
Homeತಾಜಾ ಸುದ್ದಿಚಾರ್ಲಿ ಸಿನಿಮಾ ವೀಕ್ಷಿಸಿದ ಎಫೆಕ್ಟ್ :ಬೀದಿ ನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ : ಸಿಎಂ...

ಚಾರ್ಲಿ ಸಿನಿಮಾ ವೀಕ್ಷಿಸಿದ ಎಫೆಕ್ಟ್ :ಬೀದಿ ನಾಯಿಗಳನ್ನು ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಬೀದಿನಾಯಿಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 777 ಚಾರ್ಲಿ ಕನ್ನಡ ಚಲನಚಿತ್ರ ವೀಕ್ಷಿಸಿದ ಬಳಿಕ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ಈ ಹೇಳಿಕೆ ನೀಡಿದ್ದಾರೆ.

ನಾಯಿಗಳ ತರಬೇತಿ ನೀಡುವವರಿಗೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮ ರೂಪಿಸುವ ಚಿಂತನೆ ಇದೆ ಎಂದು ಹೇಳಿರುವ ಸಿಎಂ, ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳಬೇಕು. ಪ್ರಾಣಿಗಳನ್ನು ಹಿಂಸಿಸಬಾರರು. ಬೀದಿನಾಯಿಗಳನ್ನು ಹಾಗೂ ಇತರೆ ಪ್ರಾಣಿಗಳನ್ನು ರಕ್ಷಿಸಬೇಕು ಹಾಗೂ ಸಾಧ್ಯವಾದರೆ ದತ್ತು ಪಡೆಯಬೇಕು. ಯಾರೂ ಇಲ್ಲದ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರೆ ಉಪಕಾರವಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ಸನ್ನಿ ನೆನೆಸಿಕೊಂಡು ಗದ್ಗದಿತರಾದ ಸಿಎಂ ಬಸವರಾಜ ಬೊಮ್ಮಾಯಿ, ಈಗ ತಾವು ಟಿಯಾ ಎಂಬ ನಾಯಿಯನ್ನು ಸಾಕುತ್ತಿರುವುದಾಗಿ ಹೇಳಿದರು.

- Advertisement -

Latest News

error: Content is protected !!