Sunday, June 7, 2026
Homeತಾಜಾ ಸುದ್ದಿಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

- Advertisement -
- Advertisement -

ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ.

ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ ಪಡೆಯುತ್ತಿದ್ದರು.

ಅಭಿಲಾಶಾ ಪಾಟೀಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆ ಉಂಟಾಗಿದೆ. ನಂತ್ರ ಅವರನ್ನು ಐಸಿಯುಗೆ ದಾಖಲಿಸಲಾಯಿತು. ಮಂಗಳವಾರ ಅವರ ಆರೋಗ್ಯ ಹದಗೆಟ್ಟಿದ್ದು, ರಾತ್ರಿ ಸಾವನ್ನಪ್ಪಿದ್ದಾರೆ. ಅಭಿಲಾಷಾ ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ. ಬದ್ರಿನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಸ್, ಮಲಾಲ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಅಭಿಲಾಷಾ ನಟಿಸಿದ್ದರು.

- Advertisement -

Latest News

error: Content is protected !!