Saturday, June 6, 2026
Homeತಾಜಾ ಸುದ್ದಿ  ನಟ ಅನಿರುದ್ಧ್‌ಗೆ ಎರಡು ವರ್ಷ ಕಿರುತೆರೆಯಿಂದ ನಿಷೇಧ: ಜೊತೆ ಜೊತೆಯಲಿ​ ತಂಡದಿಂದ ಅನಿರುದ್ಧ್...

  ನಟ ಅನಿರುದ್ಧ್‌ಗೆ ಎರಡು ವರ್ಷ ಕಿರುತೆರೆಯಿಂದ ನಿಷೇಧ: ಜೊತೆ ಜೊತೆಯಲಿ​ ತಂಡದಿಂದ ಅನಿರುದ್ಧ್ ‌ ಔಟ್

- Advertisement -
- Advertisement -

ಬೆಂಗಳೂರು: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್​ನ ನಾಯಕ ನಟ ಅನಿರುದ್ಧ್​ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ. ಈ ಮೂಲಕ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ. ನಟ ಅನಿರುದ್ಧ್ ಅವರ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದ್ದು, ಹೀಗಾಗಿ ಅವರನ್ನು ಸೀರಿಯಲ್​ನಿಂದ ಕೈ ಬಿಡಲು ನಿರ್ಧರಿಸಲಾಗಿದೆ.

ನಾವು ಅನಿರುದ್ಧ್ ಅವರನ್ನು ಬ್ಯಾನ್ ಮಾಡಿಲ್ಲ. ಆದರೆ ಎರಡು ವರ್ಷ ಅವರನ್ನು ಕಿರುತೆರೆಯಿಂದ ದೂರ ಇಡುತ್ತಿದ್ದೇವೆ ಎಂದು ಭಾಸ್ಕರ್ ತಿಳಿಸಿದ್ದಾರೆ. ಅನಿರುದ್ಧ್ ಅವರು ಜೊತೆ ಜೊತೆಯಲಿ ಧಾರಾವಾಹಿ ತಂಡದ ಪ್ರಮುಖರೊಬ್ಬರನ್ನು ಮೂರ್ಖ ಎಂದು ಕರೆದಿದ್ದಾರೆ. ಸ್ಕ್ರಿಪ್ಟ್ ವಿಚಾರಕ್ಕೆ ನಿಂದಿಸಿ ಶೂಟಿಂಗ್ ಸೆಟ್​ನಿಂದ ಹೊರ ಹೋಗಿದ್ದಾರೆ. ಈ ವೇಳೆ ಕಿರಿಕ್ ನಡೆದಿದೆ.

- Advertisement -

Latest News

error: Content is protected !!