Saturday, October 17, 2026
HomeUncategorizedನಟ, ನಿರ್ದೇಶಕ ಎಸ್. ನಾರಾಯಣ್ ಕಾಂಗ್ರೆಸ್ ಸೇರ್ಪಡೆ

ನಟ, ನಿರ್ದೇಶಕ ಎಸ್. ನಾರಾಯಣ್ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬೆಂಗಳೂರು: ಚಲನಚಿತ್ರ ನಟ ಮತ್ತು ನಿರ್ದೇಶಕ ಎಸ್. ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಾರಾಯಣ್ ಕಾಂಗ್ರೆಸ್ ಸೇರಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಎಸ್. ನಾರಾಯಣ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

ಈ ಮೂಲಕ ಸಿನಿಮಾ ಕ್ಷೇತ್ರದ ಬಳಿಕ ಈಗ ರಾಜಕೀಯ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ನಾರಾಯಣ್ ಮುಂದಾಗಿದ್ದಾರೆ‌. ಕಾಂಗ್ರೆಸ್ ಸೇರ್ಪಡೆ ವೇಳೆ ನಾರಾಯಣ್ ಪುತ್ರ ಮತ್ತು ನಟ ಪಂಕಜ್ ಕೂಡಾ ಉಪಸ್ಥಿತರಿದ್ದರು.

ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮತ್ತು ಕಳೆದ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ತಿಮ್ಮಯ್ಯ ಪುರ್ಲೆ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -

Latest News

error: Content is protected !!