Saturday, June 6, 2026
Homeಅಪರಾಧದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ; ಮತ್ತೇ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಶರಣು

ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ; ಮತ್ತೇ ನಾಲ್ವರು ಆರೋಪಿಗಳು ಪೊಲೀಸರ ಮುಂದೆ ಶರಣು

- Advertisement -
- Advertisement -

ಚಿತ್ರದುರ್ಗ: ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 15 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಇದೀಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾರೆ.

ಪ್ರಕರಣದ 6ನೇ ಆರೋಪಿ ಜಗ್ಗು ಅಲಿಯಾಸ್ ಜಗದೀಶ್ , 7ನೇ ಆರೋಪಿ ಅನಿ ಅಲಿಯಾಸ್ ಅನೀಲ್ ಚಿತ್ರದುರ್ಗದ ಡಿವೈಎಸ್ ಪಿ ಕಚೇರಿಗೆ ಬಂದು ಡಿವೈಎಸ್ ಪಿ ದಿನಕರ್ ಮುಂದೆ ಹಾಜರಾಗಿದ್ದಾರೆ. ಚಿತ್ರದುರ್ಗದಲ್ಲಿ ಕಾಮಾಕ್ಷಿ ಪಾಳ್ಯ ಮತ್ತು ಚಿತ್ರದುರ್ಗ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ ಎನ್ನಲಾಗಿದೆ. ಆರೋಪಿಗಳಿಬ್ಬರು ಆಟೋ ಡ್ರೈವರ್ ಗಳಾಗಿದ್ದಾರೆ ಎಂದು ವರದಿ ಹೇಳಿದೆ. ಇನ್ನು ಮತ್ತಿಬ್ಬರು ಆರೋಪಿಗಳನ್ನ ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎನ್ನುವ ಮಾಹಿತಿ ಕೂಡ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 19 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

- Advertisement -

Latest News

error: Content is protected !!