- Advertisement -
- Advertisement -
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಲಿದ್ದು ದರ್ಶನ್ ಸೇರಿ 17 ಮಂದಿ ಆರೋಪಿಗಳನ್ನು ಪೊಲೀಸರು ಜೈಲಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್‌ಗೆ ವಿಚಾರಣೆಗೆ ಹಾಜರುಪಡಿಸಲಿದ್ದಾರೆ.
ಇನ್ನು ಪ್ರಕರಣದ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಳಿಸಿರುವ ಪೊಲೀಸರು, 24ನೇ ಎಸಿಎಂಎಂ ನ್ಯಾಯಾಲಯಕ್ಕೆ 3,991 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಆರೋಪ ಪಟ್ಟಿಯನ್ನು ನಿಯಮಾನುಸಾರ ಎಲ್ಲ ಆರೋಪಿಗಳ ಪರ ವಕೀಲರಿಗೆ ಸೋಮವಾರ ಬೆಳಗ್ಗೆಯೇ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳು ಸೋಮವಾರ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ.
ಈಗಾಗಲೇ ಪವಿತ್ರಾ ಗೌಡ ಸೇರಿ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ರದ್ದುಗೊಳಿಸಿದೆ.
- Advertisement -