Sunday, June 29, 2025
Homeಅಪರಾಧನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ!

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ!

spot_img
- Advertisement -
- Advertisement -

ಮೈಸೂರು: ವ್ಯಕ್ತಿಯೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಾಚಾರ ನಡೆಸಿರುವ ಘಟನೆ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಲೀಕತ್ವದ ಫಾರಂ ಹೌಸ್‌ನಲ್ಲಿ ನಡೆದಿದೆ.

ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್‌ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು. ಅದೇ ಫಾರಂ ಹೌಸ್‌ನಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತನು ಇದ್ದ. ಅಪ್ರಾಪ್ತ ಬಾಲಕಿ ಮೇಲೆ ಸೆ.13 ರಂದು ಅತ್ಯಾಚಾರ ಎಸಗಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ.

ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ ನಡೆದಿರುವ ಬಗ್ಗೆ ಯಾರಿಗೂ ಹೇಳದಂತೆ ಆರೋಪಿಯು ಯುವತಿಗೆ ಬೆದರಿಕೆ ಹಾಕಿದ್ದನು ಎಂದು ಹೇಳಲಾಗಿದೆ. ಈ ಹಿನ್ನೆಲೆ ಸೆಪ್ಟೆಂಬರ್ 13ರಂದು ನಡೆದಿರುವ ಘಟನೆ ಕುರಿತು ನಾಲ್ಕು ದಿನಗಳ ಬಳಿಕ ಗೊತ್ತಾಗಿದೆ.

ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -
spot_img

Latest News

error: Content is protected !!