Wednesday, May 8, 2024
Homeತಾಜಾ ಸುದ್ದಿನಟ ದರ್ಶನ್‌ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ: ನಟ ಸುದೀಪ್

ನಟ ದರ್ಶನ್‌ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ: ನಟ ಸುದೀಪ್

spot_img
- Advertisement -
- Advertisement -

ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆಯನ್ನು ಖಂಡಿಸಿ ನಟ ಸುದೀಪ್‌ ಸೋಶಿಯಲ್‌ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮೊನ್ನೆ ಹೊಸಪೇಟೆಯಲ್ಲಿ ನಡೆದ ಘಟನೆಯ ವಿಡಿಯೊ ನೋಡಿದ ಮೇಲೆ ನನ್ನ ಮನಸ್ಸಿಗೆ ತೀರಾ ನೋವಾಗಿದೆ. ಪಕ್ಕದಲ್ಲಿ ಚಿತ್ರದ ನಾಯಕಿ ಹಾಗೂ ಅನೇಕ ಮಂದಿ ಇದ್ದಾರೆ. ಅವರು ಈ ಯಾವುದೂ ಸಮಸ್ಯೆಗಳ ಭಾಗವಾಗಿಲ್ಲ, ಆದರೂ ಸಾರ್ವಜನಿಕ ವೇದಿಕೆಯಲ್ಲಿ ಅವರನ್ನು ಕೂಡ ಅವಮಾನ ಮಾಡುವುದು ನೋಡಿದರೆ ನಾವು ಕನ್ನಡಿಗರು ಇಂತಹ ಅನ್ಯಾಯದ ಪ್ರತಿಕ್ರಿಯೆಯನ್ನು ಎದುರಿಸಬೇಕೆ ಎಂಬ ಪ್ರಶ್ನೆ ಮೂಡುತ್ತಿದೆ. ಈ ರೀತಿ ಸಾರ್ವಜನಿಕ ಆಕ್ರೋಶ ತೋರಿಸುವುದು ಸಮಸ್ಯೆಗೆ ಪರಿಹಾರವೇ ಎಂದು ಕಿಚ್ಚ ಸುದೀಪ್ ಪ್ರಶ್ನಿಸಿದ್ದಾರೆ.

ದರ್ಶನ್ ಚಿತ್ರೋದ್ಯಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ನಮ್ಮ ನಡುವೆ ಭಿನ್ನಾಭಿಪ್ರಾಯವಿದೆ ಎಂದಾಕ್ಷಣ ನನ್ನ ಮನಸ್ಸಿಗೆ ತಟ್ಟಿದ ವಾಸ್ತವ ವಿಷಯಗಳ ಬಗ್ಗೆ ಮಾತನಾಡುವುದನ್ನು ನಾನೆಂದಿಗೂ ನಿಲ್ಲಿಸುವುದಿಲ್ಲ. ಚಪ್ಪಲಿ ಎಸೆಯುವಂತಹ ಕೃತ್ಯಗಳಿಗೆ ಖಂಡಿತಾ ದರ್ಶನ್ ಅರ್ಹರಲ್ಲ, ಈ ಘಟನೆ ನನ್ನ ಮನಸ್ಸನ್ನು ಘಾಸಿಗೊಳಿಸಿದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!