Saturday, June 6, 2026
Homeತಾಜಾ ಸುದ್ದಿಮುಂಬೈ :‌ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಭಾನು ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

ಮುಂಬೈ :‌ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಭಾನು ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

- Advertisement -
- Advertisement -

ಮುಂಬೈ: ಮೂರು ದಿನಗಳ ಹಿಂದೆ ರಕ್ತದೊತ್ತಡ ಸಂಬಂಧಿತ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾದ ಸೈರಾ ಬಾನು ಅವರನ್ನ ಮುಂಬೈನ ಹಿಂದೂಜಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಐಸಿಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

- Advertisement -

Latest News

error: Content is protected !!