Thursday, June 4, 2026
Homeಕರಾವಳಿಉಡುಪಿಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ಡಾ.ರಮೇಶ್ ಅರವಿಂದ್ ಆಯ್ಕೆ

ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ಡಾ.ರಮೇಶ್ ಅರವಿಂದ್ ಆಯ್ಕೆ

- Advertisement -
- Advertisement -

ಕೋಟ:ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ೨೦೨೨ ನೇ ಸಾಲಿನ ಪ್ರಶಸ್ತಿಗೆ ಖ್ಯಾತ ನಟ ರಮೇಶ್‌ ಅರವಿಂದ್ ಆಯ್ಕೆಯಾಗಿದ್ದಾರೆ. ಕೋಟತೊಟ್ಟು ಗ್ರಾಮ ಪಂಚಾಯತ್‌, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನ ಕೋಟದ ಸಹಭಾಗಿತ್ವದಲ್ಲಿ ಈ ಪ್ರಶಸ್ತಿ ನೀಡಲಾಗುವುದು.

ಹಲವು ವರ್ಷಗಳಿಂದ ಸಿನಿಮಾ ಕ್ಷೇತ್ರ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಗಳಿಸಿದ ಡಾ.ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 10ರಂದು  ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

- Advertisement -

Latest News

error: Content is protected !!