Friday, May 3, 2024
Homeತಾಜಾ ಸುದ್ದಿದಂಪತಿಗೆ ಡಿಕ್ಕಿ ಹೊಡೆದ ನಟ ನಾಗಭೂಷಣ್ ಕಾರು; ಮಹಿಳೆ ಸಾವು, ಪತಿಗೆ ಗಂಭೀರ ಗಾಯ

ದಂಪತಿಗೆ ಡಿಕ್ಕಿ ಹೊಡೆದ ನಟ ನಾಗಭೂಷಣ್ ಕಾರು; ಮಹಿಳೆ ಸಾವು, ಪತಿಗೆ ಗಂಭೀರ ಗಾಯ

spot_img
- Advertisement -
- Advertisement -

ಬೆಂಗಳೂರು: ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿ, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಅಪಘಾತದಲ್ಲಿ ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಕೃಷ್ಣ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ನಟ ನಾಗಭೂಷಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಇನ್ನು ಈ ಅಪಘಾತದ ಬಗ್ಗೆ ನಾಗಭೂಷಣ ಪೊಲೀಸರ ಮುಂದೆ ಹೇಳಿಕೆಯನ್ನು ನೀಡಿದ್ದು, ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿಯಾಗಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದೆ ಎಂದಿದ್ದಾರೆ.

ಘಟನೆಯಲ್ಲಿ ಮಹಿಳೆ ತಲೆಗೆ ಗಂಭೀರವಾದ ಗಾಯ ಉಂಟಾಗಿದ್ದು. ಅವರ ಪತಿಗೂ ತಲೆ ಹಾಗೂ ಕಾಲುಗಳಿಗೆ ಗಂಭೀರ ಗಾಯಗಳಾಗಿದೆ ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!