Friday, May 17, 2024
Homeತಾಜಾ ಸುದ್ದಿ26 ವರ್ಷ ಹಿಂದಿನ ಹಲ್ಲೆ ಪ್ರಕರಣ: ನಟ,ರಾಜಕಾರಣಿ ರಾಜ್ ಬಬ್ಬರ್‌ಗೆ 2 ವರ್ಷ ಜೈಲು ಶಿಕ್ಷೆ

26 ವರ್ಷ ಹಿಂದಿನ ಹಲ್ಲೆ ಪ್ರಕರಣ: ನಟ,ರಾಜಕಾರಣಿ ರಾಜ್ ಬಬ್ಬರ್‌ಗೆ 2 ವರ್ಷ ಜೈಲು ಶಿಕ್ಷೆ

spot_img
- Advertisement -
- Advertisement -

ಬಾಲಿವುಡ್ ನಟ ಮತ್ತು ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರಿಗೆ ಉತ್ತರ ಪ್ರದೇಶದ ಜನಪ್ರತಿನಿಧಿ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚುನಾವಣಾ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. 1996ರ ಮೇ 2ರಂದು ವಾಜಿರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಮತಗಟ್ಟೆ ಅಧಿಕಾರಿ ಎಫ್‌ಐಆರ್ ದಾಖಲಿಸಿದ್ದರು.

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ನಡೆಸಿದ ಪ್ರಕರಣದಲ್ಲಿ ನಟ, ರಾಜಕಾರಣಿ ರಾಜ್ ಬಬ್ಬರ್ ಅವರಿಗೆ ನ್ಯಾಯಾಲಯ 8,500 ರೂಪಾಯಿ ದಂಡ ಕೂಡ ವಿಧಿಸಿದೆ. ತೀರ್ಪು ಪ್ರಕಟಿಸಿದ ಸಂದರ್ಭದಲ್ಲಿ ರಾಜ್ ಬಬ್ಬರ್ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

1996ರಲ್ಲಿ ಈ ಘಟನೆ ನಡೆದ ಸಂದರ್ಭದಲ್ಲಿ ರಾಜ್ ಬಬ್ಬರ್ (Raj Babbar) ಅವರು ಸಮಾಜವಾದಿ ಪಕ್ಷದಲ್ಲಿದ್ದರು. ಅವರು ಲಖನೌದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಚುನಾವಣೆ ವೇಳೆ ರಾಜ್ ಬಬ್ಬರ್ ಮತ್ತು ಮತಗಟ್ಟೆ ಅಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಕೊನೆಗೆ ಬಬ್ಬರ್ ಅವರು ಹಲ್ಲೆ ನಡೆಸಿದ್ದರು. 1996ರ ಲೋಕಸಭೆ ಚುನಾವಣೆಯಲ್ಲಿ ಸರ್ಕಾರಿ ಅಧಿಕಾರಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿತ್ತು. ಆದರೆ ಆಗ ಜಾಮೀನು ಪಡೆದುಕೊಂಡಿದ್ದರು.

ರಾಜ್ ಬಬ್ಬರ್ ಮತ್ತು ಅರವಿಂದ್ ಯಾದವ್ ವಿರುದ್ಧ ಐಪಿಸಿ ಸೆಕ್ಷನ್ 143, 332, 353, 323, 504, 188ರ ಅಡಿ ಪ್ರಕರಣ ದಾಖಲಿಸಲಾಗಿತ್ತು. ಜತೆಗೆ ಜನಪ್ರತಿನಿಧಿ ಕಾಯ್ದೆಯ ಅಡಿ ಮತ್ತು ಅಪರಾಧ ಕಾನೂನು ತಿದ್ದುಪಡಿ ಕಾಯ್ದೆ ಅಡಿ ಕೂಡ ಕೋರ್ಟ್‌ನಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಸರ್ಕಾರಿ ಸೇವಕನಿಗೆ ತಮ್ಮ ಕರ್ತವ್ಯ ನಿರ್ವಹಣೆ ಮಾಡುವುದರಿಂದ ತಡೆಯಲು ಸ್ವಯಂ ಪ್ರೇರಣೆಯಿಂದ ಗಾಸಿ ಮಾಡಿರುವುದು ಮತ್ತು ಇತರೆ ಮೂರು ಅಪರಾಧಗಳ ಅಡಿ ಶಿಕ್ಷೆಗೆ ಒಳಪಡಿಸಲಾಗಿದೆ.

- Advertisement -
spot_img

Latest News

error: Content is protected !!