Friday, June 5, 2026
Homeತಾಜಾ ಸುದ್ದಿನಟ ಪ್ರಕಾಶ್ ರೈ ಕೈಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ನಟ ಪ್ರಕಾಶ್ ರೈ ಕೈಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

- Advertisement -
- Advertisement -

ಚೆನ್ನೈ : ನಟ ಧನುಷ್ ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರವೊಂದರ ಸಾಹಸ ಶೂಟಿಂಗ್ ಚಿತ್ರೀಕರಣದ ಸಂದರ್ಭದಲ್ಲಿ ನಟ ಪ್ರಕಾಶ್ ರಾಜ್ ಅವರ ಕೈಗೆ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರೋ ಘಟನೆ ನಡೆದಿದೆ.

ಆಗಸ್ಟ್ 5ರಂದು ಆರಂಭಗೊಂಡ ನಟ ಧನುಷ್ ನಾಯಕನಾಗಿ ನಟಿಸಿರುವಂತ ಚಿತ್ರವೊಂದರ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿತ್ತು. ಈ ಶೂಟಿಂಗ್ ನ ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಪ್ರಕಾಶ್ ರೈ ಕೈಗೆ ಗಂಭೀರವಾಗಿ ಪೆಟ್ಟುಬಿದ್ದು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚೆನ್ನೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವೈದ್ಯರೂ ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದಾರೆ.

ಇದರಿಂದಾಗಿ ನಟ ಪ್ರಕಾಶ್ ರೈ ಚೆನ್ನೈನಿಂದ ಹೈದರಾಬಾದ್ ನಲ್ಲಿರುವಂತ ಅವರ ಗೆಳೆಯ ಡಾ.ಗುರುವರೆಡ್ಡಿ ಅವರ ಬಳಿಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ಟಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ನಟ ಪ್ರಕಾಶ್ ರೈ ಅವರು, ಒಂದು ಘಟನೆ ನಡೆದಿದೆ. ಹೀಗಾಗಿ ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಬಂದಿದ್ದೇನೆ. ಗೆಳೆಯ ಡಾ.ಗುರುವರೆಡ್ಡಿಯವರು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಯಾವುದೇ ಭಯವಿಲ್ಲ. ಯಾರೂ ಆತಂಕ ಪಡುವುದು ಬೇಡ ಎಂಬುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!